ರಾಜ್ಯದಲ್ಲಿ ಯಾವುದೇ ಧರ್ಮಯುದ್ಧ ನಡೆಯುತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಕೋಮುಗಲಭೆ, ಘರ್ಷಣೆಗೆ ಅವಕಾಶ ನೀಡದೇ ಶಾಂತಿ-ಸುವ್ಯವಸ್ಥೆ ಕಾಪಾಡಬೇಕು ಎಂದು ಐಜಿ- ಡಿಐಜಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು. ಕಾನೂನು ಸುವುವಸ್ಥೆ ಕಾಪಾಡುವಲ್ಲಿ ಯಾವುದೇ ರಾಜೀ ಇಲ್ಲ. ಧಾರವಾಡ, ಶಿವಮೊಗ್ಗ ಮುಂತಾದೆಡೆ ಈಗಾಗಲೇ ಪರಿಸ್ಥಿತಿ ನಿಯಂತ್ರಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. ಇದೇ ವೇಳೆ ಎಚ್.ಡಿ.ಕುಮಾರಸ್ವಾಮಿ ಆರೋಪದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ