2021-2022 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಏ.22 ರಿಂದ ಆರಂಭವಾಗಲಿದ್ದು ದ್ವಿತೀಯ ಪಿಯುಸಿ ಪರೀಕ್ಷೆಯ ಸಿದ್ದತೆ ಬಗ್ಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಬಿ.ಸಿ ನಾಗೇಶ್, 8 ತಿಂಗಳು ಮಕ್ಕಳನ್ನು ಪರೀಕ್ಷೆಗೆ ರೆಡಿ ಮಾಡಿದ್ದೇವೆ ಈಗಾಗಲೇ ದಿನಾಂಕ ಘೋಷಣೆ ಆಗಿದೆ. ಏಪ್ರಿಲ್ 22 ರಿಂದ ಮೇ 18 ರವೆರೆಗೆ ಪರೀಕ್ಷೆ ನಡೆಯಲಿದ್ದು ಒಟ್ಟು 6 ಲಕ್ಷ 84 ಸಾವಿರd 255 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ ಎಂದ್ರು.