ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ರಾಜೀನಾಮೆ ನೀಡುವಂತೆ ಯಾರೂ ನನಗೆ ಸೂಚಿಸಿಲ್ಲ. ಆ ಬಗ್ಗೆ ಮುಖಂಡರ ಭೇಟಿ ವೇಳೆ ಪ್ರಸ್ತಾಪವೂ ಆಗಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.