ಶಿವಮೊಗ್ಗ : ವಕ್ಫ್ ಮಂಡಳಿ ವತಿಯಿಂದ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಜಿಲ್ಲೆಯ ಭದ್ರಾವತಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದರು. ಇದು ಕೇವಲ ಹೇಳಿಕೆಯಾಗಿದ್ದು, ಈ ರೀತಿಯ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದರು.ಹಿಜಬ್ ನಿರ್ಣಯದ ನಂತರ