ಕೃಷ್ಣರಾಜ ಸಾಗರ ಆಣೆಕಟ್ಟಿನಲ್ಲಿ ನೀರಿಲ್ಲ. ಕಬಿನಿ ಜಲಾಶಯದಲ್ಲಿರುವ ನೀರು ಸಾಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತಮಿಳುನಾಡಿಗೆ 195 ಟಿಎಂಸಿ ನೀರು ಬಿಡಬೇಕಾಗಿದೆ. ಸಂಕಷ್ಟಸೂತ್ರದಂತೆಯೂ ನೀರು ಬಿಡಲು ಸಾಧ್ಯವಾಗುತ್ತಿಲ್ಲ. ಕೆಆರ್ಎಸ್ ತುಂಬಿದಲ್ಲಿ ನೀರು ಬಿಡಲು ಸಾಧ್ಯ ಎಂದು ತಿಳಿಸಿದ್ದಾರೆ. ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಬಗ್ಗೆ ಪ್ರತ್ರಿಕ್ರಿಯೆ ನೀಡಿದ ಅವರು, ರಾಜ್ಯದ ಪರ ವಕೀಲರು ಸುಪ್ರೀಂಕೋರ್ಟ್ನಲ್ಲಿ ವಾದ ಮಂಡಿಸಲಿದ್ದಾರೆ. ಸುಪ್ರೀಂಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣೆ ಬಗ್ಗೆ ಹೆಚ್ಚಿನ ಮಾಹಿತಿಯಿಲ್ಲ