ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ, ನಾವೆಲ್ಲರೂ ಒಟ್ಟಾಗಿದ್ದೇವೆ, ನಾವು ಮೂರು ತಂಡಗಳಲ್ಲಿ ರಾಜ್ಯ ಪ್ರವಾಸ ಮಾಡಲಿದ್ದೇವೆ, ಕಾಂಗ್ರೆಸ್ ನ ಬಸ್ ಯಾತ್ರೆ ಮಧ್ಯದಲ್ಲೇ ಪಂಕ್ಚರ್ ಆಗುತ್ತದೆ.ಅದರಲ್ಲಿ ಯಾರಿಗೂ ಯಾವುದೇ ಅನುಮಾನ ಬೇಡ, ರಾಜ್ಯದಲ್ಲಿ ಮತ್ತೆ ಕಮಲ ಅರಳುವುದು ನಿಶ್ಚಿತ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ಸಚಿವರು ನಾಯಕರು ವ್ಯಂಗ್ಯ ಮಾಡಿದ್ದಾರೆ. ಇಂದು ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯನ್ನುದ್ದೇಶಿಸಿ