ತಾಲಿಬಾನ್ ಉಗ್ರರ ವಶದಲ್ಲಿ ರುವ ಅಫ್ಘಾನಿಸ್ಥಾನದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕ ರಾಜ್ಯದ ನಾಗರೀಕರನ್ನು ತವರಿಗೆ ವಾಪಸ್ ಕರೆತರಲು ರಾಜ್ಯ ಸರ್ಕಾರ ವಿಶೇಷ ನೋಡಲ್ ಅಧಿಕಾರಿಯನ್ನು ನೇಮಕ ಮಾಡಿದೆ. ಈಗಾಗಲೇ ಕೇಂದ್ರ ಸರ್ಕಾರ ಆಫ್ಘಾನಿಸ್ತಾನದಲ್ಲಿರುವ ಭಾರತೀಯರನ್ನು ಕರೆತರಲು ಮತ್ತು ಅವರ ರಕ್ಷಣೆಗಾಗಿ ವಿದೇಶಾಂಗ ಸಚಿವಾಲಯದಿಂದ ಸಹಾಯವಾಣಿ (Helpline) ಹಾಗೂ ಇ-ಮೇಲ್ ಸೇವೆಯನ್ನು ಕೂಡ ಆರಂಭಿಸಲಾಗಿದೆ. ಇದರ ನಡುವೆ ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಮಾಹಿತಿ ನೀಡಿ, ಅವರನ್ನು ಸುರಕ್ಷಿತವಾಗಿ ಕರೆಸಿಕೊಳ್ಳಲು ಕೇಂದ್ರ