ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಈ ಹುದ್ದೆಯ ಮೇಲೆ ಉತ್ತರ ಕರ್ನಾಟಕ ಲಿಂಗಾಯುತ ಮುಖಂಡರ ಕಣ್ಣು ಬಿದ್ದಿದೆ ಎನ್ನಲಾಗಿದೆ. ಉಪಚುನಾಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸಿದ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೀಗ ತೆರವಾದ ಈ ಅಧ್ಯಕ್ಷ ಪಟ್ಟಕ್ಕೆ ಕೈ ನಾಯಕರ ನಡುವೆ ಲಾಬಿ ಶುರುವಾಗಿದೆ. ಡಿಕೆ ಶಿವಕುಮಾರ್ ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ.