ಬೆಳಗಾವಿ : ಬೆಳಗಾವಿಯ ಅಧಿವೇಶನದಲ್ಲಿ ಸಿಎಂ ಉತ್ತರ ಕರ್ನಾಟಕ ಅಭಿವೃದ್ಧಿಗೆ ಯಾವುದೇ ಚರ್ಚೆ ನಡೆಸುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಮುಖಂಡ ಉಮೇಶ್ ಕತ್ತಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡಿ ಎಂದು ಒತ್ತಾಯ ಮಾಡುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ನೆಪ ಮಾತ್ರಕ್ಕೆ ಅಧಿವೇಶನ ನಡೆಸಿದ್ದು, ಉತ್ತರ ಕರ್ನಾಟಕ ಅಭಿವೃದ್ಧಿಗೆ ಯಾವುದೇ ಚರ್ಚೆ ನಡೆಸದೆ ಅನಗತ್ಯವಾಗಿ ಅಧಿವೇಶನ ನಡೆಸಿದ್ದಾರೆ. ಸಿಎಂ