ಚಪ್ಪಲಿ ಏಟು ತಿನ್ನಬಹುದು. ಆದರೆ ದುಡ್ಡೇಟು ತಿನ್ನಲಿಕ್ಕೆ ಆಗಲ್ಲ. ನೂರು ಬಾರಿ ಚಪ್ಪಲಿಯಲ್ಲಿ ಪಟ ಪಟ ಪಟ ಅಂತ ಹೊಡೆದರೂ ತಿನ್ನಬಹುದು. ಆದರೆ ದುಡ್ಡಿನ ಏಟು ತಿನ್ನಲು ಆಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಲೆ ಏರಿಕೆ ಗಗನಕ್ಕೆ ಹೋಗಿದೆ. ಆದಾಯ ಪಾತಾಳಕ್ಕೆ ಹೋಗಿದೆ. ಇವತ್ತಿಗೆ ಆರ್ಥಿಕ ವರ್ಷದ ಲೆಕ್ಕಾಚಾರ ಮುಗಿದಿದೆ. ಹೀಗಾಗಿ ಇವತ್ತೇ ಈ ಪ್ರತಿಭಟನೆ ಮಾಡಿದ್ದೇವೆ. ದಿನಾ ಪಿಕ್ ಪಾಕೆಟ್ ಆಗುತ್ತಿದೆ. ಗ್ಯಾಸ್ ಸಿಲಿಂಡರ್,