ಮುಂದಿನ ವಿಧಾನಸಭಾ ಚುನಾವಣೆಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ನಿಲ್ಲುವ ಪ್ರಶ್ನೆಯೇ ಇಲ್ಲ. ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ವನದಲ್ಲಿ ನಡೆದ ಚಾಮುಂಡೇಶ್ವರಿ, ಇಲವಾಲ ಬ್ಲಾಕ್ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದು ನನ್ನ ಕೊನೆಯ ಚುನಾವಣೆ, 2023 ನನ್ನ ಕೊನೆಯ ಚುನಾವಣಾ