ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಪಾಕಿಸ್ತಾನ ಪರವಾಗಿ ನೀಡಿರುವ ಹೇಳಿಕೆಯನ್ನು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸಮರ್ಥಸಿಕೊಂಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟಿ ರಮ್ಯಾ ನೀಡಿರುವ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ಪಾಕಿಸ್ತಾನದಲ್ಲಿ ಕೆಲವರು ಒಳ್ಳೆಯವರು ಇದ್ದಾರೆ. ಅವರು ಭಾರತದೊಂದಿಗೆ ಉತ್ತಮ ಸಂಬಂಧ ಬೆಳೆಸಲು ಬಯಸಿದ್ದಾರೆ. ಆದರೆ, ಮೂಲಭೂತವಾದಿಗಳಿಂದ ಎರಡು ದೇಶಗಳ ಬಾಂಧವ್ಯ ಹದಗೆಟ್ಟಿದೆ ಎಂದು ಹೇಳಿದ್ದಾರೆ ಎಂದರು. ಪಾಕ್ ಪರ ರಮ್ಯಾ