ಬೆಂಗಳೂರು : ರಸ್ತೆಗುಂಡಿಗೆ ಮಹಿಳೆ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ನೋಟಿಸ್ ನೀಡಲಾಗಿದೆ.ಮಲ್ಲೇಶ್ವರಂ ಟ್ರಾಫಿಕ್ ಪೊಲೀಸರು ಈ ನೋಟಿಸ್ ನೀಡಿದ್ದಾರೆ. ಕಳೆದ 10 ದಿನಗಳ ಹಿಂದೆ ಸುಜಾತ ಟಾಕೀಸ್ ಬಳಿ ಗುಂಡಿ ತಪ್ಪಿಸಲು ಹೋಗಿ ಬಸ್ ಹರಿದು ಮಹಿಳೆ ಸಾವನ್ನಪ್ಪಿದ್ದರು.ಮಹಿಳೆ ಸಾವನ್ನಪ್ಪಿದ್ದ ಬಳಿಕ ಕುಟುಂಬಸ್ಥರ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ಮಾಡಿಕೊಂಡಿದ್ದರು. ಅಲ್ಲದೆ ಕೆಎಸ್ ಆರ್ ಟಿಸಿ ಬಸ್ ಚಾಲಕನ ಮೇಲೂ ಕೇಸ್ ಬುಕ್