ಸರ್ಕಾರದ ಇಬ್ಬರು ಉನ್ನತ ಮಟ್ಟದ ಮಹಿಳಾ ಅಧಿಕಾರಿಗಳು ಹಾದಿರಂಪ ಬೀದಿರಂಪವಾಗಿ ಜಗಳ ಮಾಡುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಸಾಮಾನ್ಯ ಮನುಷ್ಯರು ಹಾದಿಮಧ್ಯೆ ಜಗಳ ಮಾಡುವಂತೆ ವಿದ್ಯಾವಂತ ಉನ್ನತ ಅಧಿಕಾರಿಗಳು ಈ ರೀತಿ ಸಾರ್ವಜನಿಕವಾಗಿ ಕಿತ್ತಾಡುವುದರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಈ ನಿಟ್ಟಿನಲ್ಲಿ ಇಬ್ಬರಿಗೂ ನೊಟೀಸ್ ನೀಡಲು ಮುಖ್ಯಮಂತ್ರಿ ಬೊಮ್ಮಾಯಿಯವರು ಸೂಚನೆ ನೀಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇವರಿಬ್ಬರ