ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕ ಅಪಹರಣ, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಲಕ್ಷ್ಮಿ ಠಾಣೆ ಪೊಲೀಸರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ನೋಟಿಸ್ ಜಾರಿಗೊಳಿಸಿರುವುದಕ್ಕೆ ಬಿಜೆಪಿ ಕಾರ್ಯಕರ್ತರು ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಎಸಿಪಿ ಬಡಿಗೇರ್ ಅವರಿಗೆ ಮನವಿ ಸಲ್ಲಿಸಿ, ಬಿಎಸ್ವೈ ಅವರನ್ನು ವಿಚಾರಣೆಗೆ ಕರೆಸಬಾರದು. ಅವರ ಮನೆಗೆ ನೀವೇ ತೆರಳಿ ವಿಚಾರಣೆ ನಡೆಸಬೇಕು ಎಂದು ಕೋರಿದ್ದಾಗಿ ಮೂಲಗಳು ತಿಳಿಸಿವೆ. ಯಡಿಯೂರಪ್ಪ ಆಪ್ತ ಸಹಾಯಕ ವಿನಯ್ ಕೂಡಾ