ಬೆಂಗಳೂರು : ಮಾಜಿ ಸಚಿವ ರೇಣುಕಾಚಾರ್ಯಗೆ ಬಿಜೆಪಿ ರಾಜ್ಯ ಶಿಸ್ತು ಸಮಿತಿಯು ನೋಟಿಸ್ ನೀಡಿದೆ. ಪಕ್ಷ ವಿರೋಧಿ ಹೇಳಿಕೆಗಳ ಕುರಿತು ಮಾಜಿ ಸಚಿವರಿಗೆ ಸಮಿತಿಯ ಅಧ್ಯಕ್ಷ ಲಿಂಗರಾಜ್ ಪಾಟೀಲ್ ನೋಟಿಸ್ ನೀಡಿದ್ದಾರೆ. ಅಲ್ಲದೆ ಈ ನೋಟಿಸ್ ತಲುಪಿದ ಒಂದು ವಾರದೊಳಗಾಗಿ ತಾವು ಉತ್ತರವನ್ನು ಲಿಖಿತ ರೂಪದಲ್ಲಿ ನೀಡಬೇಕೆಂದು ಸೂಚಿಸಲಾಗಿದೆ.ತಾವು ಪದೇ ಪದೇ ರಾಜ್ಯ ಮತ್ತು ರಾಷ್ಟ್ರೀಯ ನಾಯಕರುಗಳ ವಿರುದ್ಧ ಮಾಧ್ಯಮಗಳ ಮುಂದೆ ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದೀರಿ.