ಕಲಬುರಗಿ ಜಿಲ್ಲೆಯ ಬರಪೀಡಿತ ತಾಲೂಕುಗಳಲ್ಲಿ ಬೆಳೆಹಾನಿಯ ಜಂಟಿ ಸಮೀಕ್ಷೆ ಕೈಗೊಂಡು ವಾಸ್ತವಿಕ ಮತ್ತು ವಿಸ್ವಾಸಾರ್ಹವಾದ ನಿಖರ ಮಾಹಿತಿ ಸಂಗ್ರಹಿಸುವಂತೆ ಕಲಬುರಗಿ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಬೆಳೆ ಹಾನಿಯ ಜಂಟಿ ಸಮೀಕ್ಷೆಯ ಕುರಿತ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಕಂದಾಯ, ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯ ಅಧಿಕಾರಿಗಳನ್ನು ಜಂಟಿ ಸಮೀಕ್ಷೆಗೆ ನೇಮಿಸಲಾಗಿದೆ. ಕೇಂದ್ರ ಸರ್ಕಾರ ಬರ ನಿರ್ವಹಣೆ ಕೈಪಿಡಿಯಲ್ಲಿ ಸೂಚಿಸಿರುವ ನಮೂನೆಯಲ್ಲಿ ಮಾಹಿತಿ ಸಂಗ್ರಹಿಸಿ