ಬೆಂಗಳೂರು : ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯ ಉದ್ದೇಶವು ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪುಗೊಳಿಸುವುದರ ಜೊತೆಗೆ ಸಹಿಷ್ಣುತೆ,ಸಹಭಾಗಿತ್ವ, ಸೇವೆ ಮತ್ತು ಸಹಾನುಭೂತಿ, ಸ್ವಾವಲಂಬನೆ ಮತ್ತು ದೇಶ ಪ್ರೇಮದ ಗುಣಗಳನ್ನು ಸಾರ್ವಜನಿಕ ಹಿತಾಸಕ್ತಿ ಮೈಗೂಡಿಸಿಕೊಳ್ಳುವಂತೆ ಮಾಡುವುದು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.ರಾಜ್ಯ ರಾಷ್ಟ್ರೀಯ ಸೇವಾ ಯೋಜನೆ ಕೋಶ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬೆಂಗಳೂರು ನಗರ ವಿಶ್ವವಿದ್ಯಾಲಯ ಎನ್ಎಸ್ಎಸ್ ಕೋಶ ವತಿಯಿಂದ ರಾಜಭವನದ ಗಾಜಿನ ಮನೆಯಲ್ಲಿ