ಬೆಂಗಳೂರು (ಆ.10): ಅರ್ಹ ಸಮುದಾಯಗಳಿಗೆ ಹಿಂದುಳಿದ ವರ್ಗಗಳ ಮಾನ್ಯತೆ ನೀಡುವ ಅಧಿಕಾರವನ್ನು ರಾಜ್ಯ ಸರ್ಕಾರ,ಗಳಿಗೆ ವಹಿಸುವ ಕೇಂದ್ರ ಸರ್ಕಾರದ ನಿರ್ಧಾರ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಗ್ನಿ ಪರೀಕ್ಷೆಯಾಗಿ ಕಾಡಲಿದೆ. ಕೇಂದ್ರ ಸರ್ಕಾರವು ಒಬಿಸಿ ಮಾನ್ಯತೆಗೆ ಸಮುದಾಯಗಳನ್ನು ಗುರುತಿಸುವ ಅಧಿಕಾರವನ್ನು ಒಬಿಸಿ ಕಾಯ್ದೆ ತಿದ್ದುಪಡಿ ಮೂಲಕ ರಾಜ್ಯಗಳಿಗೆ ನೀಡಲು ಈಗಾಗಲೇ ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ. ಇದೇ ಅಧಿವೇಶನದಲ್ಲಿ ತಿದ್ದುಪಡಿ ಕಾಯ್ದೆಯನ್ನು ಮಂಡಿಸಿ ಅಂಗೀಕಾರ ಪಡೆಯಲು ಮುಂದಾಗಿದೆ. ಈಗಾಗಲೇ