ನೆರೆ ಸಂತ್ರಸ್ತರಿಗೆ ಪರಿಹಾರ ತಲುಪದಿದ್ದರೆ ಅಧಿಕಾರಿಗಳನ್ನೇ ಅಮಾನತ್ತು ಮಾಡಲಾಗುತ್ತದೆ. ಪ್ರವಾಹ ಹಾಗೂ ಧಾರಾಕಾರ ಮಳೆಯಿಂದ ಮನೆಗಳನ್ನು ಕಳೆದುಕೊಂಡಿರುವ ಯಾವುದೇ ಕುಟುಂಬವೂ ಸರ್ಕಾರ ನೀಡುವ ಪರಿಹಾರ ಮತ್ತು ಇತರೆ ಸೌಲಭ್ಯಗಳಿಂದ ವಂಚಿತಗೊಳ್ಳದಂತೆ ಎಚ್ಚರಿಕೆ ವಹಿಸಬೇಕು. ನಿಜವಾದ ಸಂತ್ರಸ್ತರು ಪರಿಹಾರದಿಂದ ವಂಚಿತಗೊಂಡರೆ ಸಂಬಂಧಪಟ್ಟ ಸ್ಥಳೀಯ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು. ಹೀಗಂತ ಕಂದಾಯ ಸಚಿವ ಆರ್.ಅಶೋಕ್ ಎಚ್ಚರಿಕೆ ನೀಡಿದ್ರು.ಬೆಳಗಾವಿ ಜಿಲ್ಲೆಯ ಪ್ರವಾಹಬಾಧಿತ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಹಿರೇಬಾಗೇವಾಡಿ ಗ್ರಾಮದಲ್ಲಿ ಮಳೆಯಿಂದ ಉಂಟಾದ ಹಾನಿಯನ್ನು