Widgets Magazine

ಡಿಕೆ ಶಿವಕುಮಾರ್ ಬಂಧನಕ್ಕೆ ಒಕ್ಕಲಿಗರ ಆಕ್ರೋಶ

ಬೆಂಗಳೂರು| Jagadeesh| Last Modified ಬುಧವಾರ, 11 ಸೆಪ್ಟಂಬರ್ 2019 (15:05 IST)
ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಒಕ್ಕಲಿಗರು ರಾಜಧಾನಿಯಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದಾರೆ.

ಕನ್ನಡ ಪರ ಸೇರಿದಂತೆ 50ಕ್ಕೂ ಹೆಚ್ಚು ವಿವಿಧ ಸಂಘಟನೆಗಳು ಪ್ರತಿಭಟನೆಗೆ ಸಾಥ್ ನೀಡಿದ್ದವು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ ವಿರುದ್ಧ ಧಿಕ್ಕಾರ ಕೂಗಲಾಯಿತು.

ನ್ಯಾಷನಲ್ ಮೈದಾನದಲ್ಲಿ ಸೇರಿ ಅಲ್ಲಿಂದ ಮೆರವಣಿಗೆ ಮೂಲಕ ಸ್ವಾತಂತ್ರ್ಯ ಉದ್ಯಾನದವರೆಗೆ ಮೆರವಣಿಗೆ ನಡೆಸಲಾಯಿತು. ಬಿಜೆಪಿ ವಿರುದ್ಧ ತಮ್ಮ ಸಿಟ್ಟನ್ನು ಪ್ರತಿಭಟನಾಕಾರರು ಹೊರಹಾಕಿದ್ರು.

ಡಿಕೆಶಿ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿದ ಒಕ್ಕಲಿಗರು ನಾವು ನಿಮ್ಮೊಂದಿಗಿದ್ದೇವೆ ಎಂದು ಡಿಕೆಶಿಗೆ ಧೈರ್ಯ ತುಂಬೋ ಕೆಲಸ ಮಾಡಿದ್ರು.


ಇದರಲ್ಲಿ ಇನ್ನಷ್ಟು ಓದಿ :