ಹೊಸ ದಿಲ್ಲಿ : ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಹಾವಳಿ ಉಲ್ಬಣಿಸಿರುವ ನಡುವೆಯೇ ಉತ್ತರ ಪ್ರದೇಶ ಸೇರಿ ಐದು ರಾಜ್ಯಗಳ ವಿಧಾನ ಸಭೆ ಚುನಾವಣೆ ಸನ್ನಿಹಿತಗೊಂಡಿದೆ.ಹೊಸ ವರ್ಷದ ಆರಂಭದಲ್ಲಿ ನಡೆಯಬೇಕಿರುವ ಚುನಾವಣೆಯು ಸೋಂಕಿನ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗುವ ಸಾಧ್ಯತೆ ಕಡಿಮೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.ಕಳೆದೆರಡು ವಾರಗಳಿಂದ ದೇಶದಲ್ಲಿ ಓಮಿಕ್ರಾನ್ ಸೋಂಕು ಪ್ರಸರಣ ತೀವ್ರಗೊಂಡಿದೆ. ಹೀಗಾಗಿ ಸೋಂಕು ಪರಿಸ್ಥಿತಿ ಕುರಿತು ಚುನಾವಣಾ ಆಯೋಗವು ಸೋಮವಾರ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್