ಬೆಂಗಳೂರು : ವೇಗವಾಗಿ ಹರಡುತ್ತಿರುವ ಕೊರೊನಾ ವೈರಸ್ ರೂಪಾಂತರಿ ವೈರಾಣು ಓಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿನ ರಕ್ತನಿಧಿಗಳಲ್ಲಿ ರಕ್ತದಾನ ಮಾಡಲು ಬರುವವರ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ.ಕಳೆದ ಎರಡು ತಿಂಗಳಿಂದ ರಕ್ತದಾನ ಮಾಡುವವರ ಸಂಖ್ಯೆ ನಿಧಾನವಾಗಿ ಏರಿಕೆಯಾಗುತ್ತಿತ್ತು. ಆದರೆ ಕೋವಿಡ್ - 19 ರೂಪಾಂತರಿ ವೈರಾಣು ಓಮ್ರಿಕಾನ್ ಪತ್ತೆಯಾದ ನಂತರ ರಕ್ತದಾನ ಮಾಡಲು ನಾಗರಿಕರು ಹಿಂದೇಟು ಹಾಕುತ್ತಿದ್ದಾರೆ.ಕೆಲವೇ ಮಂದಿ ಮಾತ್ರ ಸ್ವಯಂ ಪ್ರೇರಿತವಾಗಿ ರಕ್ತದಾನ ಶಿಬಿರಗಳಲ್ಲಿ ರಕ್ತದಾನ ಮಾಡುತ್ತಿದ್ದಾರೆ.