ರಾಯಚೂರು : ಪ್ರಧಾನಿ ಮೋದಿ ಮತ್ತು ಅಮಿತ್ ಶಾ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಸ್ಪಷ್ಟ ಬಹುಮತದಿಂದ ಬಿಜೆಪಿ ಸರ್ಕಾರ ರಚಿಸುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.ರಾಯಚೂರಿನ ಸಿಂಧನೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯಡಿಯೂರಪ್ಪ ಮಾತನಾಡಿ, ತಾವೇ ಮುಖ್ಯಮಂತ್ರಿ ಅಂತ ಕಾಂಗ್ರೆಸ್ನವರು ಓಡಾಡುತ್ತಿದ್ದಾರೆ. ಅದು ತಿರುಕನ ಕನಸು. ಅಧಿವೇಶನ ಮುಗಿದ ಮೇಲೆ ರಾಜ್ಯ ಪ್ರವಾಸ ಆರಂಭವಾಗುತ್ತದೆ. ಬಿಜೆಪಿ ಬಗ್ಗೆ ಜನರಿಗೆ ಒಲವು ಹೇಗಿದೆ ಅನ್ನೋದು ಈಗಾಗಲೇ ಗೊತ್ತಾಗಿದೆ