ತಾಯಿ ಹಾಗೂ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆಗೆ ಸಂಬಂಧಪಟ್ಟಂತೆ ಜಿಲ್ಲಾಸ್ಪತ್ರೆಗೆ ಆರೋಗ್ಯ ಸಚಿವ ಸುಧಾಕರ್ ಭೇಟಿ ನೀಡಿದ್ರು. ಈ ಬಗ್ಗೆ ಮಾತನಾಡಿದ ಅವರು, ಸ್ಥಳೀಯರು ನಿನ್ನೆ 10 ಗಂಟೆ ವೇಳೆಗೆ ತುಂಬು ಗರ್ಭಿಣಿ ಮಹಿಳೆಯನ್ನು ಇಬ್ಬರು ಕರೆದುಕೊಂಡು ಬಂದಿದ್ದಾರೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ದಾದಿಯರು ಒಳಗಡೆ ಕರೆದುಕೊಂಡು ಹೋದ ವೀಡಿಯೋವನ್ನು ಸಿಸಿ ಕ್ಯಾಮೆರಾದಲ್ಲಿ ನೋಡಿದ್ದೇವೆ. ನಂತರ ತಾಯಿ ಕಾರ್ಡ್, ಆಧಾರ್ ಕಾರ್ಡ್ ಕೇಳಿದ್ದಾರೆ. ಅದ್ಯಾವುದೂ ಆಕೆಯ ಬಳಿ ಇರಲಿಲ್ಲ.