ವೈದ್ಯರ ಮೇಲೆ ಸಂಸದ ಅನಂತ್ ಕುಮಾರ್ ಹೆಗಡೆ ನಡೆಸಿದ ಹಲ್ಲೆ ಪ್ರಕರಣ ಹಾಗೂ ಶಾಸಕ ರಾಜು ಕಾಗೆ ಪುತ್ರಿಯ ಗೂಂಡಾಗಿರಿ ಪ್ರಕರಣದ ಬೆನ್ನಲ್ಲೇ ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಶಾಸಕ ಪಿ.ರಾಜೀವ್ ಅಧಿಕಾರಿಗಳಿಗೆ ಧಮ್ಕಿ ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು, ಕರ್ನಾಟಕ ಗೂಂಡಾರಾಜ್ಯ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಬೆಳಗಾವಿ ಜಿಲ್ಲೆಯ ಕುಡುಚಿ ಕ್ಷೇತ್ರದ ಶಾಸಕ ಪಿ.ರಾಜೀವ್ ಅವರು ಸರಕಾರಿ ಜಾಗದ ಸರ್ವೆ ವಿಚಾರಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಕಚೇರಿಯ ಅಧಿಕಾರಿಯೊಬ್ಬರಿಗೆ ಧಮ್ಕಿ ಹಾಕಿರುವ