ಬೆಂಗಳೂರು : ರಾಜ್ಯದಲ್ಲಿ ಆನ್ ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ. ಇಂದು ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆನ್ ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧ ಸಂಬಂಧ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಈ ವೇಳೆ, ಆನ್ ಲೈನ್ ಗೇಮ್ ನಿಷೇಧಿಸಲು ತೀರ್ಮಾನ ಕೈಗೊಳ್ಳಲಾಗಿದ್ದು, ಈ ಕುರಿತು ಸರ್ಕಾರ ಸದನದಲ್ಲಿ ತಿದ್ದುಪಡಿ ಕಾಯಿದೆ ಮಂಡಿಸಲಿದೆ ಎಂದರು.