ಬೆಂಗಳೂರು : ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಸಮಗ್ರ ದೇವಾಲಯ ನಿರ್ವಹಣಾ ವ್ಯವಸ್ಥೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಲೋಕಾರ್ಪಣೆಗೊಳಿಸಲಿದ್ದಾರೆ. ಐಟಿಎಂಎಸ್ ಯೋಜನೆಯಿಂದ ಒಂದೇ ವೆಬ್ಸೈಟ್ನಲ್ಲಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಾಲಯಗಳ ಸಮಗ್ರ ಮಾಹಿತಿಗಳು ಜನರ ಬೆರಳ ತುದಿಯಲ್ಲೇ ಲಭ್ಯವಿರಲಿವೆ. ಅಲ್ಲದೇ ದೇವಾಲಯಗಳಲ್ಲಿ ಲಭ್ಯವಿರುವ ಸೇವೆಗಳನ್ನು ಆನ್ಲೈನ್ ಮೂಲಕ ಬುಕ್ಕಿಂಗ್ ಮಾಡುವ ವ್ಯವಸ್ಥೆ ಇರಲಿದೆ.ದೇವಾಲಯಗಳಲ್ಲಿ ನಡೆಯುವ ಉತ್ಸವ, ಜಾತ್ರೆಗಳು, ಹಬ್ಬ ಹರಿದಿನಗಳ ವಿವರಗಳನ್ನು ಸಾರ್ವಜನಿಕರಿಗೆ/ಭಕ್ತಾಧಿಗಳಿಗೆ ಪಡೆಯಲು ಅನುಕೂಲವಾಗುವಂತೆ