ಭಾರತದ ಸರ್ವೋಚ್ಛ ನ್ಯಾಯಾಲಯವು ಕಳೆದ ಅಕ್ಟೋಬರ್ 23, 30 ಹಾಗೂ 31ರಂದು ನೀಡಿದ ತೀರ್ಪಿನನ್ವಯ ದೀಪಾವಳಿ ಹಬ್ಬದ ಸಂದರ್ಭದಲ್ಲಿ 2018ರ ನವೆಂಬರ್-5(ಧನತೇರಸ್), ನವೆಂಬರ್-6(ನರಕ ಚತುರ್ದಶಿ), ನವೆಂಬರ್-7(ದೀಪಾವಳಿ ಅಮಾವಾಸ್ಯೆ) ಹಾಗೂ ನವೆಂಬರ್-8(ಬಲಿಪಾಡ್ಯಮಿ) ದಿನಗಳಂದು ಸಾರ್ವಜನಿಕರು ನಿಗದಿಪಡಿಸಿದ ಸಮಯದಲ್ಲಿ ಮಾತ್ರ ಪಟಾಕಿ ಸಿಡಿಸಬಹುದಾಗಿದೆ.ಆಯಾ ದಿನಗಳಂದು ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬಹುದಾಗಿದ್ದು, ಸಾರ್ವಜನಿಕರು ಇದಕ್ಕೆ ಸಹಕರಿಸಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ. ನಿಷೇಧಿತ ಪಟಾಕಿ ಹೊರತುಪಡಿಸಿ ಇನ್ನುಳಿದ ಸ್ಪೋಟಕ