ರಾಜ್ಯದ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಿಎಂ ಯಡಿಯೂರಪ್ಪ ಪುತ್ರ ಹಾಗೂ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಕೊನೆಗೂ ಬಾಯಿಬಿಟ್ಟಿದ್ದಾರೆ. ಆರ್ ಎಸ್ಎಸ್ ಪ್ರಚಾರಕರಾಗಿ ಶಿಕಾರಿಪುರಕ್ಕೆ ಮಂಗಳವಾರ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ವಿಚಾರ ಮಾಧ್ಯಮಗಳಲ್ಲಷ್ಟೆ ಚರ್ಚೆಯಾಗುತ್ತಿದೆ. ಈ ಬಗ್ಗೆ ತಮ್ಮ ನಡುವೆ ಚರ್ಚೆಯಾಗಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವರು ಪಕ್ಷದಲ್ಲಿ ಹುಣಿಸೆಹಣ್ಣು ಹಿಂಡುವ ಕೆಲಸ ಮಾಡುತ್ತಿದ್ದಾರೆ. ಆದರೆ ಅವರ ಪ್ರಯತ್ನ ಫಲ ನೀಡುವುದಿಲ್ಲ