ಆಪರೇಷನ್ ಕಮಲ ಕುರಿತ ಆಡಿಯೋ ಇಂದು ಸದನದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಯಿತು. ರಾಜಕೀಯದಲ್ಲಿ ಅಲ್ಲೋಲ – ಕಲ್ಲೋಲ ಸೃಷ್ಟಿಸಿದ್ದ ಬಿಜೆಪಿ ನಾಯಕರು ಹಾಗೂ ಗುರುಮಿಠಕಲ್ ಶಾಸಕ ಪುತ್ರ ಶರಣಗೌಡನ ಆಡಿಯೋ ವಿಚಾರ ವಿಧಾನಸಭೆಯಲ್ಲಿಂದು ಪ್ರಸ್ತಾಪ ಆಯಿತು. ಆಡಿಯೋ ಬಗ್ಗೆ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಿ 15 ದಿನದಲ್ಲಿ ವರದಿ ಸಲ್ಲಿಸುವಂತೆ ಸಭಾಧ್ಯಕ್ಷ ಕೆ.ಆರ್. ರಮೇಶ್ಕುಮಾರ್ , ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸೂಚನೆ ನೀಡಿದರು.ಆಡಿಯೋ ಬಗ್ಗೆ ಪ್ರಸ್ತಾಪಿಸಿ ತಮ್ಮ