ಹುಬ್ಬಳ್ಳಿ : ಆಪರೇಷನ್ ಕಮಲದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ಪುತ್ರ ಶಂಕರಗೌಡ ನನ್ನ ಬಳಿ ಬಂದಿದ್ದು ನಿಜ, ನಾನು ಅವರ ಜೊತೆ ಮಾತನಾಡಿದ್ದು ನಿಜ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ವೈ, ಶಾಸಕರ ಮಗ ಶಂಕರಗೌಡನನ್ನು ಕುಮಾರಸ್ವಾಮಿಯವರೇ ರಾತ್ರಿ 12.30ಕ್ಕೆ ಗೆಸ್ಟ್ ಹೌಸ್ ಬಳಿಗೆ ಕಳುಹಿಸಿಕೊಟ್ಟಿದ್ದಾರೆ. ನಾನು ಅವರ ಜೊತೆ ಮಾತನಾಡಿದ್ದು ನಿಜ. ಆದರೆ ಕೆಲ ಸತ್ಯಗಳನ್ನು ಮರೆ ಮಾಚಿದ್ದಾರೆ. ಕುಮಾರಸ್ವಾಮಿ ಥರ್ಡ್