ಬೆಂಗಳೂರು : ಫೆ. 23 ರಂದು ಕೊಲಂಬೋದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಶ್ರೀಲಂಕಾ ಮೂಲದ ಮೂವರನ್ನು ನ್ನು ಬಂಧಿಸಿ 18 ಲಕ್ಷ ರೂ. ಮೌಲ್ಯದ 288 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇವರು ಗೋವಾದ ವ್ಯಕ್ತಿಗೆ ಚಿನ್ನ ಪೂರೈಸಲು ಯತ್ನಿಸುತ್ತಿದ್ದರೆಂದು ತಿಳಿದುಬಂದಿದೆ. ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಲಕ್ಷಾಂತರ ರೂ. ಮೌಲ್ಯದ 1.16 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ ಫೆ. 24 ರಂದು