ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದ್ದು, ನವೆಂಬರ್ 20ರವರೆಗೆ ಕರಡು ಪಟ್ಟಿ ಪರಿಷ್ಕರಣೆ ಕಾರ್ಯ ಕೈಗೊಳ್ಳಲಾಗುವುದು. ಕರಡು ಮತದಾರರ ಪಟ್ಟಿಗೆ ಮತದಾರರು ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಮತದಾರರ ಪಟ್ಟಿ ಪರಿಷ್ಕರಣಾ ವೀಕ್ಷಕ ಹಾಗೂ ಪ್ರಾದೇಶಿಕ ಆಯುಕ್ತ ತಿಳಿಸಿದ್ದಾರೆ.ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರೆದ 2019ನೇ ಸಾಲಿನ ಮತದಾರರ ಪಟ್ಟಿ ಪರಿಷ್ಕರಣೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ, ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳ ತಿದ್ದುಪಡಿ, ವರ್ಗಾವಣೆ, ಹೆಸರು ತೆಗೆದು