ಕೊರೊನಾ ನಿಯಂತ್ರಣಕ್ಕೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗುತ್ತಿದೆ. ಈ ನಡುವೆ ರಾಜ್ಯದ ಈ ಜಿಲ್ಲೆಯಲ್ಲಿ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ರಾಯಚೂರು ಸಿಟಿ ಹಾಗೂ ಸಿಂಧನೂರು ನಗರಗಳನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಅಗತ್ಯ ವಸ್ತುಗಳ ವ್ಯಾಪಾರ ಬಿಟ್ಟು ಬೇರೆ ಎಲ್ಲವೂ ಬಂದ್ ಆಗಿರಲಿವೆ.