ಬೆಂಗಳೂರು : ಯುಪಿಎ ಮೈತ್ರಿಕೂಟದ ಸಭೆ ಇದೇ ಜುಲೈ 17 ಹಾಗೂ 18 ರಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯಲಿದೆ. ಕೇಂದ್ರ ಬಿಜೆಪಿ ಸರ್ಕಾರದ ಎನ್ಡಿಎ ಮೈತ್ರಿ ಕೂಟದ ವಿರುದ್ಧ ಒಟ್ಟಾಗಿರುವ ಯುಪಿಎ ಮೈತ್ರಿಕೂಟದ ಮಹತ್ವದ ಸಭೆ ಇದಾಗಿದ್ದು, ಎರಡನೇ ಸಭೆಗೆ ಬೆಂಗಳೂರು ಸಾಕ್ಷಿಯಾಗಲಿದೆ. ಬಿಜೆಪಿ ವಿರೋಧಿ ಪಕ್ಷಗಳೆಲ್ಲಾ ಒಗ್ಗೂಡುತ್ತಿವೆ. ಲೋಕಸಮರದಲ್ಲಿ ಮೋದಿ ಸರ್ಕಾರವನ್ನು ಮಣಿಸುವ ಉದ್ದೇಶದಿಂದ ವಿಪಕ್ಷಗಳು ಸೋಮವಾರ ಮತ್ತು ಮಂಗಳವಾರ ಬೆಂಗಳೂರಿನಲ್ಲಿ ಮಹಾಮೈತ್ರಿ ಸಭೆಯನ್ನು ನಡೆಸಲಿವೆ.