ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಹಾಗೂ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ನಗರದ ಕೆಪಿಸಿಸಿ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಹಾಗೂ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಈಗಾಗಲೇ