ಬೆಂಗಳೂರು : ಜಾತಿ ಗಣತಿ ವರದಿ ಬಿಡುಗಡೆಗೆ ಅಖಿಲ ಭಾರತ ವೀರಶೈವ ಮಹಾಸಭಾ ವಿರೋಧ ವ್ಯಕ್ತಪಡಿಸಿದೆ. ಹಿಂದುಳಿದ ವರ್ಗಗಳ ಆಯೋಗ ಕಾಂತರಾಜು ನೇತೃತ್ವದಲ್ಲಿ ನಡೆಸಿದ ಜಾತಿ ಗಣತಿ ವರದಿ ಬಿಡುಗಡೆ ಮಾಡಬಾರದು, ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿ ಸಮೀಕ್ಷೆ ಹೆಸರಿನಲ್ಲಿ ನಡೆಸಲಾದ ಜಾತಿಗಣತಿ ವೈಜ್ಞಾನಿಕವಾಗಿಲ್ಲ, ಪಾರದರ್ಶಕವಾಗಿಲ್ಲ, ಸಮಗ್ರವಾಗಿಲ್ಲ ಎಂದು ದೂರಲಾಗಿದೆ.