ಬೆಂಗಳೂರು : ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸಿನಂತೆ ನಿತ್ಯ 5,000 ಕ್ಯೂಸೆಕ್ ಕಾವೇರಿ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶ ಪಾಲಿಸಲು ಸಾಧ್ಯವಾಗದ ಆಜ್ಞೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಬೊಮ್ಮಾಯಿ, ಕಾನೂನು ಹೋರಾಟ ಮಾಡುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಆದೇಶದಂತೆ ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್