ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವ ಬಗ್ಗೆ ಆಕ್ಷೆಪಣೆ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಆದೇಶ ನೀಡಿದೆ. ಕೇಂದ್ರೀಯ ತನಿಖಾ ದಳವು ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದಾಖಲಿಸಿರುವ ಎಫ್ಐಆರ್ನ್ನು ರದ್ದುಪಡಿಸಬೇಕೆಂದು ಕೋರಿ ಡಿಕೆ ಶಿವಕುಮಾರ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ನೇತೃತ್ವದ ಏಕ ಸದಸ್ಯ ಪೀಠವು ಪ್ರತಿವಾದಿಗಳಾದ ಸಿಬಿಐಗೆ