ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆಯಲ್ಲಿ ಸಿದ್ದರಾಮಯ್ಯ ಮೇಲೆ ಹರಿಹಾಯ್ದ ಮೂಲ ಕಾಂಗ್ರೆಸಿಗರು

ಬೆಂಗಳೂರು| pavithra| Last Modified ಗುರುವಾರ, 26 ಸೆಪ್ಟಂಬರ್ 2019 (10:41 IST)
ಬೆಂಗಳೂರು : ಅಕ್ಟೋಬರ್ 21 ರಂದು 15 ಕ್ಷೇತ್ರಗಳ ಬೈಎಲೆಕ್ಷನ್ ಘೋಷಣೆಯಾದ ಹಿನ್ನಲೆಯಲ್ಲಿ  ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಸುತ್ತಿದ್ದು, ಈ ಸಭೆಯಲ್ಲಿ ತೀವ್ರ ಗದ್ದಲ ಗಲಾಟೆ ನಡೆಯುತ್ತಿದೆ ಎಂಬುದಾಗಿ ತಿಳಿದುಬಂದಿದೆ.
ಬೈಎಲೆಕ್ಷನ್ ಹಿನ್ನಲೆಯಲ್ಲಿ  ನಡೆದ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆಯಲ್ಲಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಮಾಸಿ ಸಿಎಂ ಸಿದ್ದರಾಮಯ್ಯ  ಮೇಲೆ ಮೂಲ ಕಾಂಗ್ರೆಸ್ಸಿಗರು ಮುಗಿಬಿದ್ದಿದ್ದಾರೆ. ಹಾಗೂ ಬಿಕೆ ಹರಿಪ್ರಸಾದ್ ಅವರು ಮೇಲೆ ಹರಿಹಾಯ್ದಿದ್ದಾರೆ ಎನ್ನಲಾಗಿದೆ.


ತಮ್ಮನ್ನು ಗಣನೆಗೆ ತೆಗೆದುಕೊಳ್ಳದೆಯೇ ಪೂರ್ವಭಾವಿ ಸಭೆ ನಡೆಸಲಾಗಿದೆ ಎಂದು  ಕೆ.ಹೆಚ್.ಮುನಿಯಪ್ಪ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ ಎನ್ನಲಾಗಿದೆ.

ಇದರಲ್ಲಿ ಇನ್ನಷ್ಟು ಓದಿ :