ಬೆಂಗಳೂರು ನಗರದಲ್ಲಿ ರಾತ್ರಿ ಸುರಿದ ಮಳೆ ಅವಾಂತರ ಸೃಷ್ಟಿಯಾಗಿದೆ. ನಗರದ ಶೇಷಾದ್ರಿಪುರಂ ಸಮೀಪ ಜೆಡಿಎಸ್ ಪಕ್ಷದ ಮುಂಭಾಗದಲ್ಲಿರುವ ನಮ್ಮ ಮೆಟ್ರೋ ತಡೆ ಗೋಡೆ ಭಾರೀ ಮಳೆಗೆ ಕುಸಿದಿದೆ. ಪರಿಣಾಮ ಗೋಡೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರು, ಬೈಕುಗಳು ಜಖಂಗೊಂಡಿವೆ. ಆದರೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ತಡೆಗೋಡೆ ಪಕ್ಕದಲ್ಲಿದ್ದ 6 ಕಾರುಗಳು, 2 ಬೈಕ್ಗಳಿಗೆ ಹಾನಿಯಾಗಿದೆ. ಆದರೆ ಗೋಡೆ ಕುಸಿತದ ಕುರಿತು BMRCL ಅಧಿಕಾರಿಗಳಿಗೆ ರಾತ್ರಿಯೇ ಸ್ಥಳೀಯರು ಮಾಹಿತಿ