ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನಮ್ಮ ಮೆಟ್ರೋ ಜಾಲ ಹೆಚ್ಚಿದಂತೆ ಆದಾಯ ಸಂಗ್ರಹದ ಕಡೆಗೂ ಗಮನ ನೀಡುತ್ತಿದೆ. ಆದ್ದರಿಂದ ಇನ್ನಷ್ಟು ಪ್ರಯಾಣಿಕ ಸ್ನೇಹಿ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದಾಯ ಸಂಗ್ರಹಣೆ ಭಾಗವಾಗಿ ಮೆಜೆಸ್ಟಿಕ್ನ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ನಲ್ಲಿ ಇನ್ನೂ ನಾಲ್ಕು ಮಹಡಿಗಳನ್ನು ನಿರ್ಮಾಣ ಮಾಡಲಾಗುತ್ತದೆ. ಇಲ್ಲಿ ಥಿಯೇಟರ್, ಶಾಪಿಂಗ್ ಮಾಲ್ ಸೇರಿದಂತೆ ವಾಣಿಜ್ಯ ಚಟುವಟಿಕೆಗೆ ಅವಕಾಶ ನೀಡಲಾಗುತ್ತದೆ. ಇದು ಇಂಟರ್ ಚೇಂಜ್ ನಿಲ್ದಾಣವಾಗಿದ್ದು, ನೇರಳೆ ಮಾರ್ಗದಿಂದ ಹಸಿರು ಮಾರ್ಗ