ಬಹುದಿನಗಳಿಂದ ನಡೆಯುತ್ತಿದ್ದ ನಮ್ಮ ಮೆಟ್ರೋ ರೈಲು ಯೋಜನೆಯ ಹಂತ-2ರ ರೀಚ್-2 ವಿಸ್ತರಿಸಿದ (ಮೈಸೂರು ರಸ್ತೆಯ ನಾಯಂಡಹಳ್ಳಿ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗೆ) ನೂತನ ಸಂಚಾರ ಕೆಂಗೇರಿ ಮಾರ್ಗ ಕಾಮಗಾರಿ ಪೂರ್ಣಗೊಂಡಿದ್ದು, ಇನ್ನು ಕೆಲವೇ ದಿನಗಳಲ್ಲಿ ವಾಣಿಜ್ಯ ಸಂಚಾರ ಸಾಧ್ಯತೆ ಇದೆ ಎಂದು ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಹುತೇಕ ಕಾಮಗಾರಿ ಪೂರ್ಣ ಹಿನ್ನೆಲೆಯಲ್ಲಿಆಗಸ್ಟ್ ,11 ಮತ್ತು 12 ರಂದು ಅಂತಿಮ ಸುರಕ್ಷತಾ ಪರೀಕ್ಷೆ ನಡೆಯಲಿದ್ದು ರೈಲ್ವೇ ಸುರಕ್ಷತಾ ಆಯುಕ್ತರಿಂದ