ಹಾಸನ : ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ 5 ಗ್ಯಾರಂಟಿಗಳನ್ನ ಜಾರಿಗೆ ತರುವುದು ನಮ್ಮ ಮೊದಲ ಆದ್ಯತೆ ಎಂದು ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ. ಬಜೆಟ್ನಲ್ಲಿ ಹಾಸನ ಜಿಲ್ಲೆಗೆ ಏನೂ ಸಿಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. 5 ಗ್ಯಾರಂಟಿಗಳನ್ನ ಘೋಷಣೆ ಮಾಡಿದ್ದೇವೆ. ಅದನ್ನ ಜಾರಿಗೊಳಿಸುವುದು ನಮ್ಮ ಮೊದಲ ಆದ್ಯತೆ. ಮುಂದಿನ ದಿನಗಳಲ್ಲಿ ಬೇರೆ ಕೆಲಸಗಳಿಗೆ ಆದ್ಯತೆ ನೀಡುತ್ತೇವೆ ಹೇಳಿದ್ದಾರೆ. ಗೃಹಲಕ್ಷ್ಮಿ