ಭಯೋತ್ಪಾದಕರನ್ನ ಹಿಡಿದಿದ್ದಾರೆ. ನಮ್ಮ ಪೊಲೀಸ್ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಅವರಿಗೆ ಅಭಿನಂದನೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.ಇಂತಹ ಸೂಕ್ಷ್ಮ ವಿಚಾರದಲ್ಲಿ ಕೆಲಸ ಮಾಡಿದ್ದಾರೆ.ಉಗ್ರರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸರ್ಕಾರ ಕೂಡ ಈ ಬಗ್ಗೆ ಹೆಚ್ಚು ಗಮನ ಕೊಡಬೇಕು.ಇತ್ತೀಚೆಗೆ ರಸ್ತೆಗಳಲ್ಲಿ ಕೊಲೆಗಳಾಗ್ತಿವೆ.ಇದರ ಬಗ್ಗೆ ಜನರಿಗೆ ಆತಂಕ ಎದುರಾಗಿದೆ.ಕೂಡಲೇ ಸರ್ಕಾರ ಇಂತ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.