ಅನಿಲ ಟ್ಯಾಂಕರೊಂದರ ಮೇಲ್ಭಾಗದ ವಾಲ್ ಏಕಾಏಕಿ ಓಪನ್ ಆದ ಘಟನೆ ನಡೆದಿದೆ. ವಾಲ್ ಓಪನ್ ಆಗಿ ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗಿ ಸ್ಥಳದಲ್ಲಿ ಆತಂಕ ಮೂಡಿಸಿದ ಘಟನೆ ಉಪ್ಪಿನಂಗಡಿ ಬಳಿಯ ಕರ್ವೇಲ್ ನಲ್ಲಿ ನಡೆದಿದೆ.ಮಂಗಳೂರಿನಿಂದ ಹಾಸನ ಕಡೆ ಹೊರಟಿದ್ದ ಟೋಟಲ್ ಗ್ಯಾಸ್ ಕಂಪನಿಯ ಅನಿಲ ಟ್ಯಾಂಕರ್ ನ ಮೇಲ್ಭಾಗದ ವಾಲ್ ಕರ್ವೇಲ್ ಬಳಿ ಏಕಾಏಕಿ ತೆರೆದುಕೊಂಡಿತ್ತು. ಈ ಸಂದರ್ಭ ರಭಸದಿಂದ ನೀರು ಚಿಮ್ಮುವ ಶೈಲಿಯಲ್ಲಿ ಗ್ಯಾಸ್ ಮೇಲ್ಭಾಗಕ್ಕೆ ಚಿಮ್ಮಿ, ಗಾಳಿಯೊಂದಿಗೆ