ರಾಜ್ಯದ ಐದು ಕ್ಷೇತ್ರಗಳ ಉಪಚುನಾವಣೆಯು ಮುಂಬರುವ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ವಿಶ್ಲೇಷಣೆ ಮಾಡಲಾಗುತ್ತಿದೆ. ಉಪಚುನಾವಣೆಯ ಫಲಿತಾಂಶ ಬಿಜೆಪಿಗೆ ಖಡಕ್ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ. ಮೂರು ಲೋಕಸಭೆ ಹಾಗೂ ಎರಡು ವಿಧಾನ ಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಪಕ್ಷಗಳಿಗೆ ದೀಪಾವಳಿ ಗಿಫ್ಟ್ ಭರ್ಜರಿಯಾಗಿ ನೀಡಿದಂತಾಗಿದೆ. ಆದರೆ ಬಿಜೆಪಿಗೆ ಆತ್ಮಾವಲೋಕನ ಹಾಗೂ ಖಡಕ್ ಎಚ್ಚರಿಕೆಯ ಸಂದೇಶವನ್ನು ನೀಡಿದಂತಾಗಿದೆ.ಐದು ಕ್ಷೇತ್ರಗಳಲ್ಲಿ ನಾಲ್ಕು ಕ್ಷೇತ್ರಗಳನ್ನು ದೋಸ್ತಿ ಪಕ್ಷಗಳು ತಮ್ಮ ಬುಟ್ಟಿಗೆ