ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ನ್ಯಾಯಾಧೀಕರಣ ಈಗಾಗಲೇ ತೀರ್ಪು ನೀಡಿದೆ. ಆದರೆ ತೀರ್ಪಿನ ಪ್ರಕಾರ ಇದುವರೆಗೂ ನೀರನ್ನು ಬಳಸಿಕೊಳ್ಳಲು ಸರ್ಕಾರ ಮುಂದಾಗುತ್ತಿಲ್ಲ ಎಂದು ಕಳಸಾ ಬಂಡೂರಿ ಹೋರಾಟಗಾರರು ಕಿಡಿಕಾರಿದ್ದಾರೆ.ಹುಬ್ಬಳ್ಳಿಯಲ್ಲಿ ಕಳಸಾ ಬಂಡೂರಿ ಹೋರಾಟಗಾರರು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಹೋರಾಟಗಾರ ಅಮೃತ್ ಇಜಾರಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ 13 ಟಿಎಂಸಿ ನೀರು ಬಳಸಿಕೊಳ್ಳುವಂತೆ ನ್ಯಾಯಾಧಿಕರಣ ತೀರ್ಪು ನೀಡಿದೆ. ಆದರೆ ರಾಜ್ಯ ಸರ್ಕಾರ ಹಾಗೂ ಈ ಭಾಗದ ಜನಪ್ರತಿನಿಧಿಗಳು ನೀರಿನ