ನೀರಾವರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯವಾಗಿದೆ ಹೀಗಾಗಿ ಮೂರು ಭಾಗಗಳಿಂದ ಪಾದಯಾತ್ರೆ ಮಾಡೋ ಮೂಲಕ ಹೋರಾಟ ಮಾಡೋದಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಅಧಿವೇಶನದ ಬಳಿಕ ಪಾದಯಾತ್ರೆ ಪ್ರಾರಂಭ ಮಾಡ್ತೀವಿ. ಕುಮಾರಸ್ವಾಮಿ ಅವ್ರ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯಲಿದೆ . ರಾಜ್ಯದ ಹಿತ ಕಾಪಾಡುವುದಕ್ಕೆ ಈ ಹೋರಾಟ ಮಾಡಲಾಗ್ತಿದೆ ಎಂದರು. ಪ್ರಾದೇಶಿಕ ಪಕ್ಷವಾಗಿ ನಮ್ಮ ಹೋರಾಟ ಮಾಡ್ತೀವಿ. ಬಿಜೆಪಿ ಕಾಂಗ್ರೆಸ್ ಈ ವಿಚಾರದಲ್ಲಿ